ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ

ನೆಲಮಂಗಲ: ತಡರಾತ್ರಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟವಾಗ್ತಿದ್ದ ಹಸುಗಳನ್ನು ಭಜರಂಗದಳದ ಕಾರ್ಯಕರ್ತರು ರಕ್ಷಿಸಿದ್ದಾರೆ. ನೆಲಮಂಗಲದ ಕುಣಿಗಲ್ ರಸ್ತೆ ಬಳಿ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಹಸುಗಳಿದ್ದು ಸ್ಥಳಕ್ಕೆ ಬಂದ ಪೊಲೀಸರು ಹಸುಗಳು ಹಾಗೂ ಬೊಲೆರೋ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಬೊಲೆರೋ ಚಾಲಕ ಚನ್ನರಾಯಪಟ್ಟಣ ಮೂಲದ ಗಿರೀಶ್ (37) ಎಂಬಾತನನ್ನು ಬಂಧಿಸಲಾಗಿದೆ. ಹಸುಗಳನ್ನು ಹಾಸನದಿಂದ ಬೊಲೆರೋ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಪೊಲೀಸರಿಂದ ರಕ್ಷಿಸಲ್ಪಟ್ಟ ಹಸುಗಳನ್ನು ಶಿವಗಂಗೆಯ ಗೋಶಾಲೆಗೆ ಕಳುಹಿಸಲಾಗಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Edited By : Manjunath H D
Kshetra Samachara

Kshetra Samachara

18/01/2022 10:11 am

Cinque Terre

922

Cinque Terre

0

ಸಂಬಂಧಿತ ಸುದ್ದಿ