ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ರಿಯಲ್ ಎಸ್ಟೇಟ್ ಉದ್ಯಮಿ ರಾಜಶೇಖರ್ ರೆಡ್ಡಿ ಕೊಲೆ ಪ್ರಕರಣ: ಮೂವರ ಬಂಧನ

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ರಾಜಶೇಖರ್ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಗಣೇಶ್ , ಶ್ರೀನಿವಾಸ್ , ಕಾರ್ತಿಕ್ ಬಂಧಿತ ಆರೋಪಿಗಳು. ಇದೇ ತಿಂಗಳು 5ನೇ ತಾರೀಕಿನಂದು ರಿಯಲ್ ಎಸ್ಟೇಟ್ ಉದ್ಯಮಿ ರಾಜಶೇಖರ್ ರೆಡ್ಡಿ ಆನೇಕಲ್ ಸಬ್ ರಿಜಿಸ್ಟ್ರೇಷನ್ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಮೂರು ಜನ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಈ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವಾದ ಕೈಗೆತ್ತಿಕೊಂಡಿದ್ದ ಪೊಲೀಸರು ಆರೋಪಿಗಳ ಪತ್ತೆಗಾಗಿ ಬೆನ್ನತ್ತಿದರು. ಸದ್ಯ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯದಲ್ಲಿ ಭಾಗಿಯಾದ ಇತರ ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರೆಲ್ಲರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬಂಧಿತ ಮೂವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

19/01/2022 02:12 pm

Cinque Terre

29.5 K

Cinque Terre

0

ಸಂಬಂಧಿತ ಸುದ್ದಿ