ಆನೇಕಲ್: ರಿಯಲ್ ಎಸ್ಟೇಟ್ ಉದ್ಯಮಿ ರಾಜಶೇಖರ ರೆಡ್ಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಜಯರಾಮ್ ಮತ್ತು ಶಶಿ ಎಂಬವರನ್ನು ಬಂಧಿಸುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿನ ದ್ವೇಷ ಕಾರಣಕ್ಕೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದಾಗಿ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜ.5 ರಂದು ರಿಯಲ್ ಎಸ್ಟೇಟ್ ಉದ್ಯಮಿ ರಾಜಶೇಖರ್ ರೆಡ್ಡಿ ಆನೇಕಲ್ ಸಬ್ ರಿಜಿಸ್ಟ್ರೇಷನ್ ಕೆಲಸಕ್ಕೆಂದು ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಬರುವಾಗ ಮೂವರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದರು. ಈ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೇಸನ್ನು ಕೈಗೆತ್ತಿಕೊಂಡಿದ್ದ ಪೊಲೀಸರು ಆರೋಪಿಗಳ ಜಾಡು ಬೆನ್ನತ್ತಿ, ಇದೀಗ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
21/01/2022 10:28 am