ಆನೇಕಲ್: ವ್ಯಕ್ತಿಯೋರ್ವ ಮದ್ಯದ ಅಮಲಿನಲ್ಲಿ ಪತ್ನಿಯನ್ನು ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಯಪ್ಪನ ಹಳ್ಳಿಯಲ್ಲಿ ನಡೆದಿದೆ.
ಮಂಡ್ಯ ಮೂಲದ ಭಾರತಿ ಕೊಲೆಯಾದ ಪತ್ನಿ, ರಘು ಕೊಲೆಗೈದ ಪಾಪಿ. ಪತ್ನಿ ಭಾರತಿಯ ಶೀಲ ಶಂಕಿಸಿ ರಘು ಆಗಾಗ ಜಗಳವಾಡುತ್ತಿದ್ದ. ಕುಡಿದ ಮತ್ತಿನಲ್ಲಿ ಪದೇ ಪದೇ ಗಲಾಟೆ ಮಾಡುತ್ತಿದ್ದ. ಇದೇ ವಿಚಾರಕ್ಕೆ ಇಂದು ಕೂಡ ಜಗಳ ಆರಂಭವಾಗಿತ್ತು. ಈ ವೇಳೆ ಕೋಪಗೊಂಡ ರಘು ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
22/01/2022 10:19 pm