ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ ಮೇಲೆ ಎಫ್ ಐಆರ್ ದಾಖಲಾಗಿದೆ.ಸಾರಿಗೆ ವಿಭಾಗದ ಕಾರ್ಯಪಾಲಕ ಅಭಿಯಂತರ ಮಹದೇವ್, ಗುಮಾಸ್ತರಾದ ರಮೇಶ್, Computer Operator ಆದ ಸತೀಶ್ ಮತ್ತು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಮಾಲೀಕರಾದ ಶಿವಾನಂದ ವಿರುದ್ಧ ಹಲಸೂರು ಗೇಟ್ ಪೋಲಿಸ್ ಠಾಣೆ ಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ವಿನಯ್ ಬಾಬು ನೀಡಿರುವ ದೂರಿನನ್ವಯ ಹಲಸೂರು ಗೇಟ್ ಪೋಲೀಸರು ಪಾಲಿಕೆ ಸಿಬ್ಬಂದಿಗಳ ವಿರುದ್ಧ FIR ದಾಖಲಿಸಿದ್ದಾರೆ.
ಈ ಹಿಂದೆ ಪಾಲಿಕೆಯ ಅಧಿಕಾರಿಗಳ ಬಳಕೆಗೆಂದು ಗುತ್ತಿಗೆ ಆಧಾರದಲ್ಲಿ ವಾಹನ ಗಳನ್ನು ಒದಗಿಸುತ್ತಿದ್ದ ಟ್ರಾವೆಲ್ಸ್ ಗಳ ಪೈಕಿ ಒಂದಾಗಿರುವ M.M.Logistics Tours & Travels ಸಂಸ್ಥೆಯು ತನ್ನ ಚಾಲಕರು ಸಿಬ್ಬಂದಿ ವರ್ಗದವರಿಗೆ ಪಾವತಿಸುತ್ತಿದ್ದ PF - ESI ದಾಖಲೆಗಳನ್ನು - ಆ ಸಂಸ್ಥೆಯು ಪಾಲಿಕೆಗೆ ನಿಡುತ್ತಿದ್ದ ಕಡತಗಳಿಂದ ತೆಗೆದು, ಅವುಗಳನ್ನೇ ನಕಲು ಮಾಡಿಕೊಂಡು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಎಂಬ ಹೆಸರಿನಲ್ಲಿ ಕಡತಗಳನ್ನು ತಯಾರು ಮಾಡಿ ಪಾಲಿಕೆಗೆ ಪ್ರತಿ ತಿಂಗಳು ಹತ್ತಾರು ಲಕ್ಷ ರೂ.ಗಳನ್ನು ವಂಚಿಸುತ್ತಿದ್ದ ಆರೋಪಗಳ ಕೇಳಿ ಬಂದಿತ್ತು.
ಈ ಸಂಬಂಧ ದಾಖಲೆಗಳ ಸಹಿತ M.M.Logistics Tours & Travels ಸಂಸ್ಥೆಯ ವ್ಯವಸ್ಥಾಪಕ ವಿನಯ್ ಬಾಬು ನೀಡಿರುವ ದೂರಿನನ್ವಯ ಹಲಸೂರು ಗೇಟ್ ಪೋಲೀಸರು FIR ದಾಖಲಿಸಿದ್ದಾರೆ.
PublicNext
24/01/2022 12:38 pm