ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಅಂತರಾಜ್ಯ ಗ್ಯಾಂಗ್ ವೊಂದನ್ನು ಮಾರತ್ತಹಳ್ಳಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಅಜಯ್, ರಾಜು, ರವಿ ಬಂಧಿತ ಆರೋಪಿಗಳು. ಬಂಧಿತರಿಂದ 40 ಕೆಜಿ ಗಾಂಜಾ ಸೀಜ್ ಮಾಡಲಾಗಿದ್ದು, ಮತ್ತೊಬ್ಬ ಪ್ರಮುಖ ಆರೋಪಿಗಾಗಿ ಮಾರತ್ತಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

ಪೊಲೀಸರ ಕಣ್ತಪ್ಪಿಸಲು ಆರೋಪಿಗಳು ಮೂರ್ನಾಲ್ಕು ಕಡೆ ವಾಹನ ಬದಲಿಸಿ ಬೆಂಗಳೂರಿಗೆ ಗಾಂಜಾ ಸರಬರಾಜುಗೆ ಮುಂದಾಗಿದ್ದರು. ಒಡಿಶಾದಿಂದ ವಿಶಾಖಪಟ್ಟಣಕ್ಕೆ ಒಂದು ಅಲ್ಲಿಂದ ಬೆಂಗಳೂರಿಗೆ ಮತ್ತೊಂದು ವಾಹನದಲ್ಲಿ ಗಾಂಜಾ ತಂದು ಮಾರಾಟ ಮಾಡಲಾಗುತ್ತಿತ್ತು. ಒಮ್ಮೆಗೆ ನೂರಾರು ಕೆ ಜಿ ಗಾಂಜಾ ನಗರಕ್ಕೆ ತರುತ್ತಿದ್ದ ಆರೋಪಿಗಳು ಈಗ ಅಂದರ್ ಆಗಿದ್ದಾರೆ.

ಕೋಡ್ ವರ್ಡ್ ಹೇಳಿದವರಿಗೆ ಮಾತ್ರ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ಸೂರ್ಯ ಹೆಸರಿನಲ್ಲಿ ಕೋಡ್ ವರ್ಡ್ ಇಟ್ಕೊಂಡು ಗಾಂಜಾ ಮಾರಾಟಕ್ಕೆ ಮುಂದಾಗಿರುವುದರ ಖಚಿತ ಮಾಹಿತಿ ಮೇರೆಗೆ, ಗ್ಯಾಂಗ್ ಮೇಲೆ ನಿಗಾವಹಿಸಿದ ಮಾರತ್ತಹಳ್ಳಿ ಪೊಲೀಸರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Edited By : Shivu K
Kshetra Samachara

Kshetra Samachara

03/02/2022 12:15 pm

Cinque Terre

1.53 K

Cinque Terre

0

ಸಂಬಂಧಿತ ಸುದ್ದಿ