ನೆಲಮಂಗಲ: ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದು ವ್ಯಕ್ತಿಯೊಬ್ಬ ಮದ್ಯದೊಂದಿಗೆ ವಿಷ ಬೆರೆಸಿಕೊಂಡು ಸೇವಿಸಿ ಸಾವಿಗೆ ಶರಣಾಗಿದ್ದಾನೆ.
ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಕೈಗಾರಿಕಾ ಪ್ರದೇಶದ ಬಳಿ ಈ ಘಟನೆ ನಡೆದಿದೆ. 39 ವರ್ಷ ವಯಸ್ಸಿನ ಆನಂದ್ ಕುಮಾರ್ ಎಂಬಾತ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮಾಗಡಿಯ ಸಿಡಿಗನಹಳ್ಳಿ ಮೂಲದ ಮೃತ ಆನಂದ್, ತ್ಯಾಮಗೊಂಡ್ಲು ಸಮೀಪದ ತೋಟನಹಳ್ಳಿಯಲ್ಲಿನ ಹೆಂಡತಿ ತವರು ಮನೆಯಲ್ಲೇ ವಾಸವಿದ್ದ. ತ್ಯಾಮಗೊಂಡ್ಲು ಕೈಗಾರಿಕಾ ಪ್ರದೇಶದಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಶವಪರೀಕ್ಷೆ ನಡೆಸಿ, ಮೃತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/02/2022 04:14 pm