ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕದ್ದ ಬೈಕ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳು ಅಂದರ್

ಬೆಂಗಳೂರು : ಕದ್ದ ಬೈಕ್ ನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಕಾಲೇಜು ಮತ್ತು ಬಸ್ ಸ್ಟಾಂಡ್ ಗಳಲ್ಲಿ ವಿದ್ಯಾರ್ಥಿಗಳು ಮತ್ತು ಯುಕರಿಗೆ ಗಾಂಜಾ ಗಾಂಜ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆಂಗೇರಿ , ಬಾಗಲುಗುಂಟೆ ,ಹೆಚ್ ಎಎಲ್ ಸೇರಿ ನಗರದ ವಿವಿಧ ಭಾಗದಲ್ಲಿ ಬೈಕ್ ಕದಿಯುತ್ತಿದ್ದ ಆರೋಪಿಗಳಾದ ಬೈರೇಶ್ ಮತ್ತು ಯಾಸೀರ್ ಅರಾಫತ್ ಅದೇ ಬೈಕ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 8 ದ್ವಿಚಕ್ರವಾಹನ ಹಾಗೂ 1.2 ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

Edited By : Nirmala Aralikatti
Kshetra Samachara

Kshetra Samachara

05/02/2022 10:00 am

Cinque Terre

670

Cinque Terre

0

ಸಂಬಂಧಿತ ಸುದ್ದಿ