ಬೆಂಗಳೂರು: ಬದ್ಮಾಷ್ ಪಬ್‌ನಲ್ಲಿ ಕನ್ನಡ ಹಾಡು ಹಾಕದಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪಬ್‌ಗೆ ತೆರಳಿ ಕನ್ನಡ ಹಾಡುಗಳಿಗೆ ಮೊದಲ ಪ್ರಾಶಸ್ತ್ಯ ನೀಡುವಂತೆ ಎಚ್ಚರಿಕೆ ನೀಡಿದ್ದರು. ಇದಾದ ಬಳಿಕ ಬದ್ಮಾಷ್ ಪಬ್‌ನ ಡಿಜೆ ಸಿದ್ಧಾರ್ಥ್ ಕ್ಷಮೆ ಕೇಳಿದ್ದಾರೆ. ಕಾರಣಾಂತರದಿಂದ ನಕನ್ನಡ ಹಾಡನ್ನು ಪ್ಲೇ ಮಾಡಿಲ್ಲ ಎಂದು ಡಿಜೆ ಸ್ಪಷ್ಟಪಡಿಸಿದ್ದಾರೆ.
ನಾನು ಹುಟ್ಟಿ ಬೆಳೆದಿದ್ದು ಕರ್ನಾಟಕದಲ್ಲಿಯೇ ಕಾವೇರಿ ನೀರು ಕುಡಿದು ಬೆಳೆದಿದ್ದೇನೆ. ನನಗೆ ಅತಿ ಹೆಚ್ಚು ಇಷ್ಟವಾಗುವ ಭಾಷೆ ಅಂದರೆ ಕನ್ನಡ. ನಾನು ಪ್ರತಿ ಬಾರಿಯೂ ಕನ್ನಡ ಹಾಡನ್ನು ಪ್ಲೇ ಮಾಡುತ್ತೇನೆ. ಪುನೀತ್ ರಾಜ್‌ಕುಮಾರ್ ಎಂದರೆ ನನಗೆ ತುಂಬಾ ಇಷ್ಟ. ಬೊಂಬೆ ಹೇಳುತೈತೆ ಹಾಡನ್ನು ಪ್ರತಿ ಬಾರಿಯೂ ಪ್ಲೇ ಮಾಡುತ್ತೇನೆ. ಆದ್ರೆ ಮೊನ್ನೆ ತಡವಾಗಿದ್ದರಿಂದ ಕನ್ನಡ ಹಾಡು ಹಾಕಲು ಸಾಧ್ಯವಾಗಿಲ್ಲ ಎಂದು ಡಿಜೆ ಸಿದ್ಧಾರ್ಥ್ ಸ್ಫಷ್ಟ ಪಡಿಸಿದ್ದಾರೆ.
ಸಡನ್ ಆಗಿ ರಾತ್ರಿ 12.30 ಕ್ಕೆ ಪಬ್ ಕ್ಲೋಸ್ ಮಾಡಲು ಹೇಳಿದ್ರು. ಹಾಗಾಗಿ ಕನ್ನಡ ಹಾಡು ಹಾಕಲು ಸಾಧ್ಯವಾಗಿಲ್ಲ ಕನ್ನಡ ಹಾಡು ಹಾಕದಿದ್ದಕ್ಕೆ ನಾನು ಕ್ಷಮೆ ಕೇಳ್ತೇನೆ. ಆದರೆ ಸುಮಿತಾ ಹಾಗೂ ಸ್ನೇಹಿತರು ಮಾಡ್ತಿರುವ ಆರೋಪ ಸುಳ್ಳು. ಮ್ಯೂಸಿಕ್ ಸಿಸ್ಟಂ ಆಫ್ ಮಾಡಿದ ಮೇಲೆ ಕನ್ನಡ ಹಾಡು ಯಾಕೆ ಹಾಕಿಲ್ಲ ಅಂದ್ರು ಮೊದಲು ಅವರು ಕನ್ನಡ ಹಾಡು ಹಾಕಲು ಕೇಳಿಲ್ಲ ಎಂದು ಸಿದ್ಧಾರ್ಥ್ ಸ್ಪಷ್ಟನೆ ನೀಡಿದ್ದಾರೆ.
PublicNext
07/02/2022 01:12 pm