ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ; ಮೂವರು ಯುವತಿಯರ ರಕ್ಷಣೆ

ಆನೇಕಲ್ : ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಮೋಸದ ಕೂಪಕ್ಕೆ ತಳ್ಳಿದ್ದ ಪಾತಕಿಗಳನ್ನು ಬಂಧಿಸುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ vbhc ಅಪಾರ್ಟ್ ಮೆಂಟ್ ನಲ್ಲಿ ಅಸ್ಸಾಂ ಮೂಲದ ಮೂವರು ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ಕೂಪಕ್ಕೆ ತಳ್ಳಲಾಗಿತ್ತು.

ಖಚಿತ ಮಾಹಿತಿ ಮೇರೆಗೆ ಡಿವೈಎಸ್ ಪಿ ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಈ ಮೂವರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಇನ್ನು, ಕೃತ್ಯಕ್ಕೆ ಬಳಸಿದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

09/02/2022 07:48 am

Cinque Terre

14.52 K

Cinque Terre

0

ಸಂಬಂಧಿತ ಸುದ್ದಿ