ಬೆಂಗಳೂರು : ಸಿಲಿಕಾನ್ ಸಿಟಿ ಪೊಲೀಸ್ರು ಒಂದು ಕಡೆ ಗಾಂಜಾ ಡ್ರಗ್ ವಿರುದ್ಧ ಸಮರ ಸಾರಿದ್ದಾರೆ. ಆ ನಿಟ್ಟಿನಲ್ಲಿ ಪೊಲೀಸ್ರು ಕಾರ್ಯಪ್ರವೃತ್ತರಾಗಿದ್ದಾರೆ. ಫೆ.10 ರ ರಾತ್ರಿ ಉಪ್ಪಾರಪೇಟೆ ಇನ್ಸ್ಪೆಕ್ಟರ್ ಶಿವಸ್ವಾಮಿ ಅಂಡ್ ಟೀಂ ಕಾರ್ಯಾಚರಣೆ ನಡೆಸಿ 44 ಕೆಜಿ ಗಾಂಜಾ ಸೀಜ್ ಮಾಡಿದ್ದಾರೆ. ಗಾಂಜಾವನ್ನು ಚೀಲದಲ್ಲಿ ತುಂಬಿಕೊಂಡು ಆಟೋದಲ್ಲಿ ಮಾರಾಟ ಮಾಡ್ತಿದ್ದ ವೇಳೆ ಪೊಲೀಸ್ರು ದಾಳಿ ನಡೆಸಿ ಆಟೋ ಸಮೇತ ಗಾಂಜ ಸೀಜ್ ಮಾಡಿದ್ದಾರೆ.
ಸದ್ಯ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದು ,ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇನ್ನು ಆರೋಪಿಗಳು ಗಾಂಜಾವನ್ನು ಕಾಲೇಜು ವಿದ್ಯಾರ್ಥಿಗಳು ಹಾಗೂ ಡ್ರೈವರ್ ಗಳಿಗೆ ಸಪ್ಲೈ ಮಾಡ್ತಿದ್ದಾಗಿ ಬಾಯಿ ಬಿಟ್ಟಿದ್ದಾರೆ. ಸದ್ಯ ಬಂಧಿತರಿಂದ 43 ಕೆಜಿ 380 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
Kshetra Samachara
14/02/2022 06:32 pm