ಬೆಂಗಳೂರು: ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯನ್ನ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಸನದ ಅರಕಲಗೂಡು ಮೂಲದ ಹರೀಶ್ ಬಂಧಿತ ಆರೋಪಿಯಾಗಿದ್ದು, ಮದುವೆಯಾಗಿದ್ದ ಮಹಿಳೆಯರಿಗೆ ವಾಟ್ಸ್ಆಪ್ ಮೂಲಕ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ. ಈ ಬಗ್ಗೆ ಮಹಿಳೆ ಪತಿ ತನ್ನ ಪತ್ನಿಗೆ ನಿತ್ಯ ಅಶ್ಲೀಲ ಫೋಟೋ ಕಳುಹಿಸುತ್ತಿದ್ದಾನೆ ಎಂದು ದೂರು ನೀಡಿದ್ದರು.
ಅಶ್ಲೀಲ ವಿಡಿಯೋ ಜೊತೆಗೆ ನಿತ್ಯ ಹಗಲು ರಾತ್ರಿಯೆಲ್ಲ ಕರೆ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪಿ ಹರೀಶ್ ಇದೇ ರೀತಿ 10ಕ್ಕೂ ಹೆಚ್ಚು ಮಹಿಳೆಯರಿಗೆ ಟಾರ್ಚರ್ ನೀಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.
Kshetra Samachara
18/02/2022 12:33 pm