ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೆಲಮಂಗಲ: ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ನೆಲಮಂಗಲ: ಫ್ಯಾನ್‌ಗೆ ವೇಲ್‌ನಿಂದ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲ್ಲೂಕು ಅಂಚೇಪಾಳ್ಯದ ಪ್ರಕೃತಿ ಲೇಔಟ್‌ನಲ್ಲಿ ನಡೆದಿದೆ.

ಮಟ್ಟನವಿಲೆ ಮೂಲದ ಲಕ್ಷ್ಮಣಗೌಡ 48 ವರ್ಷ ಮೃತ ದುರ್ದೈವಿ,ಈತ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಮಾನಸಿಕ ಖಿನ್ನತೆಗೊಳಗಾಗಿದ್ದ, ಯಶವಂತಪುರ 8ನೇ ಡಿಪೋನಲ್ಲಿ ಚಾಲಕ ಆಗಿದ್ದ ಈತ ಅಂಚೇಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದ ಜೊತೆ ವಾಸವಿದ್ದ.

ಅತೀ ಮದ್ಯ ವ್ಯಸನಿಯಾಗಿದ್ದ ಕಾರಣ ಶ್ವಾಸಕೋಸದ ಸಮಸ್ಯೆ ಉಂಟಾಗಿತ್ತು, ಕಳೆದ ಒಂದೂವರೆ ತಿಂಗಳ ಹಿಂದೆ ಶಸ್ತ್ರಚಿಕಿತ್ಸೆ ಆದ ಕಾರಣ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಆದರೂ ಮದ್ಯ ಸೇವನೆ ಮಾತ್ರ ಬಿಟ್ಟಿರಲಿಲ್ಲ, ಇದ್ರಿಂದ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

19/02/2022 12:56 pm

Cinque Terre

1.16 K

Cinque Terre

0

ಸಂಬಂಧಿತ ಸುದ್ದಿ