ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಳಿದಾಸನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿಬಿದ್ದ ಗ್ರಾಮಸ್ಥರು

ಆನೇಕಲ್ : ಹಾಡ ಹಗಲೇ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರ ಯುವಕರ ತಂಡ ವ್ಯಕ್ತಿಯ ಮೇಲೆ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಆನೇಕಲ್ ಉಪವಿಭಾಗದ ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಳಗಾರನಹಳ್ಳಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ತಿರುವಣ್ಣಾಮಲೈ ಕಾಳಿದಾಸ ಎಂಬುವವರ ಮೇಲೆ ನಡೆದ ಹಲ್ಲೆ ಕಂಡ ಗ್ರಾಮಸ್ಥರನ್ನು ಬೆಚ್ಚಿ ಬಿದ್ದಿದ್ದಾರೆ.

ಚಾಲಕ ವೃತ್ತಿ ಮಾಡುತ್ತಿದ್ದ ಕಾಳಿದಾಸ ಎಂಬ ವ್ಯಕ್ತಿ ತಮಿಳುನಾಡಿನಿಂದ ಬಂದು ಬಳಗಾರನಹಳ್ಳಿಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಟೀ ಕುಡಿಯಲು ಅಂಗಡಿ ಬಳಿ ಹೋದ ವೇಳೆ ಈ ಅಟ್ಯಾಕ್ ನಡೆದಿದೆ.

ಕೌಟುಂಬಿಕ ಕಲಹಗಳ ಹಿನ್ನಲೆಯಲ್ಲಿ ಕೊಲೆ ಯತ್ನ ನಡೆದಿದ್ದು ಅತ್ತಿಬೆಲೆ ಕೈಗಾರಿಕಾ ಪ್ರದೇಶದ ಖಾಸಗೀ ಆಸ್ಪತ್ರೆಯಲ್ಲಿ ಕಾಳಿದಾಸ ಸಾವು ಬದುಕಿನ ನಡುವೆ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಕುರಿತು ಅತ್ತಿಬೆಲೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Edited By : Shivu K
PublicNext

PublicNext

23/02/2022 02:36 pm

Cinque Terre

33.2 K

Cinque Terre

0

ಸಂಬಂಧಿತ ಸುದ್ದಿ