ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ

ಹಣಕಾಸಿನ ತೊಂದರೆಯಿಂದ ಏಳು ವರ್ಷದ ಮಗಳನ್ನ ಕೊಲೆ ಮಾಡಿದ ತಂದೆ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಹೃದಯವಿದ್ರಾವಕ ಘಟನೆ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ವಿಜಯಕುಮಾರ್ (39) ಆತ್ಮಹತ್ಯೆ ಮಾಡಿಕೊಂಡ ತಂದೆ.

ಹೆಂಡತಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದ ವೇಳೆ ಗಂಡ ವಿಜಯಕುಮಾರ್, ಏಳು ವರ್ಷದ ಮಗಳು ಸಮೀಕ್ಷಾಳ ಕುತ್ತಿಗೆಗೆ ಚಾರ್ಜರ್ ವೈರ್ ನಿಂದ ಬಿಗಿದು ಕೊಲೆ‌ ಮಾಡಿದ್ದಾನೆ. ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.

ವೆಲ್ಡರ್ ಕೆಲಸ ಮಾಡಿಕೊಂಡಿದ್ದ ವಿಜಯ್ ಕುಮಾರ್ ಮೂಲತಃ ಕೋಲಾರ ಜಿಲ್ಲೆಯ ಬಂಗಾರಪೇಟೆಯವರು. ಬೆಂಗಳೂರಿನ ಬೊಮ್ಮಸಂದ್ರದ ರೇವಣ್ಣ ಎಂಬುವರ ಮನೆಯಲ್ಲಿ ವಾಸವಾಗಿದ್ದರು. ಸ್ಥಳಕ್ಕೆ ಧಾವಿಸಿದ ಡಿವೈಎಸ್ಪಿ ಮಲ್ಲೇಶ್ ಹೆಬ್ಬಗೋಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

24/02/2022 10:50 am

Cinque Terre

2.97 K

Cinque Terre

0

ಸಂಬಂಧಿತ ಸುದ್ದಿ