ಬೆಂಗಳೂರು: ಬುಲೆಟ್ ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಹಾಗೂ ಸಹ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೈಕ್ ಸವಾರ ಕಿರಣ್ ಮತ್ತು ಆತನ ಸ್ನೇಹಿತ ಅಪಘಾತದಲ್ಲಿ ಸ್ಥಳಸಲ್ಲೇ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬ್ಯಾಟರಾಯನಪುರ ಜಂಕ್ಷನ್ ಬಳಿ ಇಂದು ಮುಂಜಾನೆ ಘಟನೆ ನಡೆಸಿದ್ದು, ಅತೀ ವೇಗದ ಚಾಲನೆಯೇ ದುರ್ಘಟನೆಗೆ ಕಾರಣ ಎನ್ನಲಾಗುತ್ತಿದೆ. ಹೆಬ್ಬಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸವಾರರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
Kshetra Samachara
27/02/2022 04:25 pm