ಬೆಂಗಳೂರು: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಬೈಕ್ ನಲ್ಲಿ ಹಿಂಬಾಲಿಸಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಹನುಮಂತನಗರ ಪೊಲೀಸರು ಬಂಧಿಸಿದ್ದಾರೆ.
ಫೆ.14 ರಂದು ಶ್ರೀ ನಗರದ ಕಾಳಪ್ಪ ಬ್ಲಾಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಟಾರ್ಗೆಟ್ ಮಾಡಿಕೊಂಡು ಮಹಿಳೆ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಎಗರಿಸಿದ್ದಾರೆ.
ಈ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾದಲ್ಲಿಯ ದೃಶ್ಯ ಆಧರಿಸಿ ವರದರಾಜ್ ಹಾಗೂ ರಾಜೇಶ್ ಎಂಬುವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
Kshetra Samachara
01/03/2022 03:30 pm