ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಪಾರ್ಟ್‌ಮೆಂಟ್, ಸರ್ವಿಸ್ ಸೆಂಟರ್‌ನಲ್ಲಿ ಕಾರು ಕದಿಯುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ಸರ್ವಿಸ್ ಸೆಂಟರ್‌ ಮತ್ತು ಅಪಾರ್ಟ್‌ಮೆಂಟ್‌ನಲ್ಲಿ ನಿಲ್ಲಿಸಿದ್ದ ಕಾರುಗಳನ್ನು ಮಾಲೀಕರ ರೀತಿ ಕಳ್ಳತನ‌ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಹೆಣ್ಣೂರು ಠಾಣೆಯಲ್ಲಿ ಕಾರು ಕಳ್ಳತನ ಕೇಸ್ ದಾಖಲಾದ 48 ಗಂಟೆಯಲ್ಲೇ ಇಬ್ಬರು ಆರೋಪಿಗಳನ್ನ ಬಂಧಿಸಿ 7 ಲಕ್ಷ ರೂ. ಮೌಲ್ಯದ ಎರಡು ಕಾರುಗಳನ್ನ ಸೀಜ್ ಮಾಡಿದ್ದಾರೆ. ಮಂಜುನಾಥ್ ಮತ್ತು ಶೇಕ್ ನವಾಜ್ ಬಂಧಿತ ಆರೋಪಿಗಳಾಗಿದ್ದು, ಅಪಾರ್ಟ್‌ಮೆಂಟ್ ಪಾರ್ಕಿಂಗ್‌ನಲ್ಲಿರುವ ಕಾರ್‌ಗಳನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು. ಕಾರ್ ಕಳವು ಮಾಡುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು. ಸಿಸಿಟಿವಿ ಆಧಾರದಲ್ಲಿ ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲು ಸೇರಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

02/03/2022 10:12 pm

Cinque Terre

944

Cinque Terre

0

ಸಂಬಂಧಿತ ಸುದ್ದಿ