ಆನೇಕಲ್: ಭೂಗತಲೋಕದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ 45 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.
ಇಲಿಯಾಸ್ ಅಬ್ದುಲ್ ಆಸೀಫ್ ಅಲಿಯಾಸ್ ಇಲಿಯಾಸ್ ಬಜ್ಕನಾ ಬಂಧಿತ ಆರೋಪಿ. ಇಲಿಯಾಸ್ ವಿರುದ್ಧ ಕೊಲೆ ಸುಲಿಗೆ ದರೋಡೆ ಕೊಲೆ ಪ್ರಯತ್ನ ಡ್ರಗ್ಸ್ ಮಾಫಿಯಾ ಸೇರಿದಂತೆ 45ಕ್ಕೂ ಹೆಚ್ಚು ಪ್ರಕರಣಗಳು ಈತನ ವಿರುದ್ಧ ದಾಖಲಾಗಿದೆ. ಇನ್ನು ಮುಂಬೈ ಪೊಲೀಸರ ಮಾಹಿತಿ ಮೇರೆಗೆ ತಡರಾತ್ರಿ ಅತ್ತಿಬೆಲೆ ಪೋಲಿಸರು ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದರು. ಟಿವಿಎಸ್ ರಸ್ತೆಯ ಸ್ಪಂದನ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಇಲಿಯಾಸ್ ಇರುವ ಬಗ್ಗೆ ಮಾಹಿತಿ ಕಲೆಹಾಕಿದ್ದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಆರೋಪಿಯನ್ನು ಬಂಧಿಸಿ ಮುಂಬೈ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
08/03/2022 05:34 pm