ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಧ್ಯರಾತ್ರಿ ಮನೆಗೆ ನುಗ್ಗಿ ಕಳ್ಳತನ: ಖದೀಮನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಮಧ್ಯರಾತ್ರಿ ಮನೆಗೆ‌ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ‌ಯೊಂದು ಇದೀಗ ಬೆಳಕಿಗೆ ಬಂದಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಇತ್ತೀಚೆಗೆ ಮನೆ ಮಾಲೀಕರು ಬೀಗ ಹಾಕಿ ಕುಟುಂಬ ಸಮೇತ ಮೈಸೂರಿಗೆ ಹೋಗಿದ್ರು..‌ ಇದನ್ನರಿತ ಖದೀಮ ಮಧ್ಯರಾತ್ರಿ ಮನೆಗೆ ನುಗ್ಗಿ ಬೀಗ ಒಡೆದು 75 ಸಾವಿರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕದ್ದು ಪರಾರಿಯಾಗಿದ್ದಾನೆ. ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.‌ ಮನೆ ಮಾಲೀಕರು ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಮಡಿವಾಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By : Manjunath H D
Kshetra Samachara

Kshetra Samachara

09/03/2022 06:19 pm

Cinque Terre

2.31 K

Cinque Terre

0