ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ‌ಗೈದ ದುರುಳರು

ಬೆಂಗಳೂರು: ಬಾಣಸವಾಡಿ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ಗಳಾದ ಬಸವರಾಜು, ಮುಜಾಫರ್‌ ಮೇಲೆ ದುರುಳರು ಹಲ್ಲೆ ನಡೆಸಿದ್ದಾರೆ. ಬಸವರಾಜು ಮತ್ತು ಮುಜಾಫರ್ ವಾರದ ಹಿಂದೆ ತಮ್ಮ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಗಸ್ತಿನಲ್ಲಿದ್ದಾಗ ಘಟನೆ ನಡೆದಿದೆ.

ರಾತ್ರಿ ವೇಳೆ ಅನುಮಾನಾಸ್ಪದವಾಗಿ ಆಟೋದಲ್ಲಿ ಓಡಾಡುತ್ತಿರುವವರನ್ನು ತಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆಟೋದಲ್ಲಿದ್ದ ಮೂವರು ದುಷ್ಕರ್ಮಿಗಳು ವಾಗ್ವಾದಕ್ಕಿಳಿದಿದ್ದರು. ನಂತರ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಎರಡು ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.

Edited By : Nagesh Gaonkar
PublicNext

PublicNext

13/03/2022 10:03 pm

Cinque Terre

59.42 K

Cinque Terre

0

ಸಂಬಂಧಿತ ಸುದ್ದಿ