ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೊಲೆರೋ ಕಾರನ್ನ ರಾತ್ರೋ ರಾತ್ರಿ ಕಳ್ಳತನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೌದು ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 3 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುರೇಶ್ ಎಂಬುವವರು ತಮ್ಮ ಮನೆ ಮುಂದೆ ಬೊಲೆರೋ ಕಾರ್ ಪಾರ್ಕ್ ಮಾಡಿದ್ದರು.
ಆದರೆ ಬೆಳಗ್ಗೆ ನೋಡುವಷ್ಟರಲ್ಲಿ ಕಾರು ಮಾಯವಾಗಿದೆ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಬನಶಂಕರಿ ಠಾಣೆಗೆ ಕಾರು ಮಾಲೀಕ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
PublicNext
23/03/2022 08:42 pm