ದೊಡ್ಡಬಳ್ಳಾಪುರ : ಮಾಹಿತಿ ಹಕ್ಕಿನಡಿ ಮಾಹಿತಿ ಕೇಳಿದ ವ್ಯಕ್ತಿಗೆ ಜೀವ ಬೆದರಿಕೆ ಕರೆ ಬಂದಿದ್ದು, ಜೀವ ಬೆದರಿಕೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ಮತ್ತು ಮಾಹಿತಿ ಸೋರಿಕೆ ಮಾಡಿದ ಅಧಿಕಾರಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಆರ್ ಟಿ ಐ ಕಾರ್ಯಕರ್ತ ಮತ್ತು ಆರ್ ರಮೇಶ್ ಎಂಬುವರು ಮಾರ್ಚ್ 22 ರಂದು ಕೆಸ್ತೂರು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯ ಖರ್ಚು ವೆಚ್ಚಗಳ ಬಗ್ಗೆ ಮಾಹಿತಿ ಪಡೆಯಲು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ ಕೆಲವೇ ಗಂಟೆಯಲ್ಲಿ ಅನಾಮಧೇಯ ವ್ಯಕ್ತಿ ರಮೇಶ್ ರವರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಮತ್ತು ಜೀವ ಬೆದರಿಕೆ ಹಾಕಿದ್ದಾನೆ. ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿರುವುದನ್ನು ಬೇರೆಯವರಿಗೆ ತಿಳಿಸಿದ ಅಧಿಕಾರಿಯ ಕರ್ತವ್ಯ ಲೋಪದ ವಿರುದ್ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಯಲ್ಲಿ ದೂರು ನೀಡಲಾಗಿದೆ.
ಬೈಟ್ : ರಮೇಶ್ , ಆರ್ ಟಿಐ, ಕಾರ್ಯಕರ್ತ.
Kshetra Samachara
24/03/2022 02:46 pm