ಬೆಂಗಳೂರು: ಮೂಡಲಪಾಳ್ಯದ ಸಂಜೀವಿನಿ ನಗರದ ಹಾಸಿಗೆ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಾಸಿಗೆ ಬಳಸುವ ಹತ್ತಿ ಮತ್ತು ಬಟ್ಟೆಗೆ ಬೆಂಕಿ ತಗುಲಿ ಇಡೀ ಗೋದಾಮು ಬೆಂಕಿಗೆ ಆಹುತಿಯಾಗಿದೆ. ಮೂರನೇ ಮಹಡಿಯಲ್ಲಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳಿಂದ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಆದರೆ ಗೋಡೌನ್‌ನಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿದ್ದು, ಚಂದ್ರಾಲೇಔಟ್ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
Kshetra Samachara
24/03/2022 07:51 pm