ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಾವಣ್ಯ ಕೊಲೆ ಕೇಸ್ : ತನಿಖೆ ಮತ್ತಷ್ಟು ಚುರುಕು

ಆನೇಕಲ್ : ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ಯಡವನಹಳ್ಳಿ ಬಳಿ ಪತಿಯೇ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಆರೋಪಿ ಸಂಪತ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿಕೃಷ್ಣ ತಿಳಿಸಿದರು.

ಇದೇ ತಿಂಗಳ 21ನೇ ತಾರೀಖಿನಂದು ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ಯಡವನಹಳ್ಳಿ ಬಳಿ ಗಂಡ ಸಂಪತ್ ಪತ್ನಿ ಲಾವಣ್ಯಳನ್ನು ಬೆಳಗಿನ ಜಾವ ಕತ್ತು ಸೀಳಿ ಕೊಲೆ ಮಾಡಿದ್ದ ಈ ವೇಳೆ ಅಡ್ಡಬಂದ ಮಗನನ್ನು ಹಲ್ಲೆ ಮಾಡಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಪತ್ ಗುಣಮುಖ ನಾದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ ಎಂದು ತಿಳಿಸಿದರು.

Edited By : Manjunath H D
Kshetra Samachara

Kshetra Samachara

25/03/2022 05:10 pm

Cinque Terre

2.81 K

Cinque Terre

0

ಸಂಬಂಧಿತ ಸುದ್ದಿ