ಬೆಂಗಳೂರು:ಸುಲಭವಾಗಿ ಹಣ ಸಂಪಾದನೆಗೆ ಅಡ್ಡದಾರಿ ತುಳಿದಿದ್ದ ರೌಡಿಶೀಟರ್ ಸಿಸಿಬಿಗೆ ಲಾಕ್ ಆಗಿದ್ದಾನೆ. ರಾತ್ರಿ ವೇಳೆ ಒಂಟಿಯಾಗಿ ಹೋಗುವವರನ್ನ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 23 ರಂದು ಕರ್ಮಷಿಯಲ್ ಸ್ಟ್ರೀಟ್ ಠಾಣಾ ವ್ಯಾಪ್ತಿಯ ಪ್ಲೇನ್ ಸ್ಟ್ರೀಟ್ ಬಳಿ ಸೈಯದ್ ಫಾಜಿಲ್ ಮಾರಕಾಸ್ತ್ರ ಇಟ್ಟುಕೊಂಡು ದರೋಡೆಗೆ ಸಂಚು ರೂಪಿಸಿದ್ದ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ರೌಡಿ ನಿಗ್ರಹ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ರೌಡಿಶೀಟರ್ ನನ್ನು ಬಂಧಿಸಿದ್ದಾರೆ.
ಸೈಯದ್ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಕೊಲೆ ಪ್ರಕರಣ, ಕೆ.ಜಿ.ಹಳ್ಳಿ ಹಾಗೂ ಡಿ.ಜಿ.ಹಳ್ಳಿ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ ಮತ್ತು ಹಲ್ಲೆ ಪ್ರಕರಣ ದಾಖಲಾಗಿವೆ.
Kshetra Samachara
25/03/2022 05:48 pm