ಆನೇಕಲ್: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕನೋರ್ವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಘಟನೆ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಜಾಪುರ ಕೆರೆಯಲ್ಲಿ ಅಪರಿಚಿತ ಬಾಲಕನ ಶವ ಪತ್ತೆಯಾಗಿದ್ದು ದನ ಕಾಯುವವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಸರ್ಜಾಪುರ ಪೊಲೀಸರು ಪರಿಶೀಲನೆ ನಡೆಸಿದಾಗ 12 ವರ್ಷ ಆಸುಪಾಸಿನ ಬಾಲಕ ಎಂದು ಗುರುತಿಸಲಾಗಿದೆ. ಬಾಲಕನ ಮಾಹಿತಿಯನ್ನ ಕಲೆಹಾಕಲಾಗಿದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮೇಲ್ನೋಟಕ್ಕೆ ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಹೊರತೆಗೆದು ಶವಾಗಾರಕ್ಕೆ ಕಳಿಸಲಾಗಿದೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
-ಹರೀಶ್ ಗೌತಮನಂದ ಪಬ್ಲಿಕ್ ನೆಕ್ಸ್ಟ್ ಆನೇಕಲ್
Kshetra Samachara
28/03/2022 12:58 pm