ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾನೂನುಬಾಹಿರವಾಗಿ ಸರ್ಕಾರಿ ಜಮೀನು ಮಾರಾಟ: ಬಿಎಸ್ ವೈ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಅಧಿಕಾರ ಪ್ರಭಾವ ಬಳಸಿಕೊಂಡು ಕಾನೂನುಬಾಹಿರವಾಗಿ ಸರ್ಕಾರಿ ಜಮೀನು ಮಾರಾಟ ಮಾಡಿರುವ ಆರೋಪದಡಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ, ಎಸಿಬಿಗೆ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಹಾಗೂ ವಕೀಲರ ತಂಡ ಎಸಿಬಿಗೆ ದೂರು ನೀಡಿದೆ.

ಬಿಎಸ್ ವೈ ಮುಖ್ಯಮಂತ್ರಿಯಾಗಿರುವಾಗ ದೇವನಹಳ್ಳಿಯ ಹರಳೂರು ಮತ್ತು ಪೂಲನಹಳ್ಳಿಯ ಕೆಐಎಡಿಬಿಗೆ ಸೇರಿದ 118 ಎಕರೆ ಜಮೀನನ್ನ ಖಾಸಗಿ ಶಿಕ್ಷಣ ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಮಾಡಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆ ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಜಮೀನೂ ಮಂಜೂರು ಮಾಡಿಕೊಟ್ಟಿದ್ದಾರೆ. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು. ಆದರೆ ಈ ನಿಯಮವನ್ನ ಗಾಳಿಗೆ ತೂರಿ ಖಾಸಗಿ ವಿ‌ವಿ ಸ್ಥಾಪಿಸಲು ಜಮೀನು ಮಂಜೂರು ಮಾಡಿದ್ದಾರೆ. ಹಿಂದಿನ ಸರ್ಕಾರ ಅಪರ ಮುಖ್ಯ ಕಾರ್ಯದರ್ಶಿ ಪ್ರತಿ ಎಕರೆಗೆ 1.61 ಕೋಟಿ ದರ ನಿಗದಿ ಪಡಿಸಿದ್ದರು. ಆದರೆ 116.16 ಎಕರೆ ಜಾಗವನ್ನ 50 ಕೋಟಿಗೆ ಮಂಜೂರು ಮಾಡಿದ್ದಾರೆ. ನಿಗದಿ ಪಡಿಸಿರುವ ಮಾರ್ಗಸೂಚಿ ದರದಂತೆ 186.76 ಕೋಟಿಗೆ ನೀಡದೆ ಕೇವಲ 50 ಕೋಟಿಗೆ ಮಂಜೂರು ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ಬಿ ಸ್ ವೈ ಸಿಎಂ ಆಗಿದ್ದ ಅವಧಿಯಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಜಮೀನು ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Edited By : Manjunath H D
PublicNext

PublicNext

28/03/2022 03:33 pm

Cinque Terre

29.2 K

Cinque Terre

4