ಬೆಂಗಳೂರು: ಕೋಲಾರದಿಂದ ಬೆಂಗಳೂರು ನಗರಕ್ಕೆ ರಕ್ತಚಂದನವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಕೆಆರ್ ಪುರ ಪೋಲಿಸರು ಮೇಡಹಳ್ಳಿಯ ಬಳಿ ಬಂಧಿಸಿದ್ದಾರೆ. ಕೋಲಾರ ಮೂಲದ ಅಬ್ದುಲ್ ರೆಹಮಾನ್ ಬಂಧಿತ ಆರೋಪಿ. ಬಂಧಿತನಿಂದ 240 ಕೆಜಿ ರಕ್ತ ಚಂದನ ವಶಪಡಿಸಿಕೊಳ್ಳಲಾಗಿದೆ. ಕೋಲಾರದಿಂದ ಕಾರ್ ಮೂಲಕ ಬೆಂಗಳೂರು ನಗರಕ್ಕೆ ಸಾಗಿಸುತ್ತಿದ್ದ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
PublicNext
28/03/2022 10:24 pm