ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಎಸಿಬಿ 128 ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಸರ್ಕಾರಕ್ಕೆ ಮನವಿ

ಬೆಂಗಳೂರು: ಎಸಿಬಿಗೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ಹಿಂದೇಟು ಹಾಕಿದೆ.

ಕಳೆದ ವರ್ಷ ನವೆಂಬರ್ ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪ್ರಧಾನ ಕಚೇರಿ ಹಾಗೂ ನಗರದ ವಿವಿಧ ಶಾಖಾ ಕಚೇರಿಗಳ ಮೇಲೆ ಎಸಿಬಿ ದೊಡ್ಡ‌ ಮಟ್ಟದಲ್ಲಿ ಎಸಿಬಿ ದಾಳಿ ನಡೆಸಿತ್ತು.ದಾಳಿ ವೇಳೆ ಅಪಾರ ಪ್ರಮಾಣದ ಸಂಪತ್ತು‌ ಪತ್ತೆಯಾಗಿತ್ತು.

ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 128 ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ‌ ಸಕ್ಷಮ ಪ್ರಾಧಿಕಾರಕ್ಕೆ ಎಸಿಬಿ ಪತ್ರ ಬರೆದಿತ್ತು.‌ ಈ ಪೈಕಿ 8 ಮಂದಿ ಮಾತ್ರ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಪ್ರಾಧಿಕಾರ ಅನುಮತಿ ನೀಡಿದೆ. ಇನ್ನುಳಿದ 120 ಅಧಿಕಾರಿಗಳ‌ ವಿರುದ್ಧ ಮುಂದಿನ ಕಾನೂನು‌ ಕ್ರಮ ಕೈಗೊಳ್ಳಲು ಅನುಮತಿ ನೀಡಿಲ್ಲ.

ಲಂಚಗುಳಿತನ ಹೋಗಲಾಡಿಸಬೇಕಾದ ಸರ್ಕಾರವೇ ಭ್ರಷ್ಟರೊಂದಿಗೆ ಕೈ ಜೋಡಿಸಿದೆಯಾ ಎಂಬ ಅನುಮಾನ ಕಾಡಿದೆ.

ಮೆಲ್ನೋಟಕ್ಕೆ ಅಕ್ರಮ ಆಸ್ತಿ ಗಳಿಕೆ ಕಂಡು ಬಂದರೂ‌ ಹೆಚ್ಚಿನ ವಿಚಾರಣೆಗೆ ಒಳಪಡಿಸಲು ಎಸಿಬಿಗೆ ಸಾಧ್ಯವಾಗಿಲ್ಲ. ಸರ್ಕಾರಿ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ ಅನ್ವಯ 17 (ಎ) ಎಫ್ಐಆರ್ ದಾಖಲಿಸಿಕೊಳ್ಳಬೇಕಾದರೆ ಸಕ್ಷ‌ಮ‌ ಪ್ರಾಧಿಕಾರದಿಂದ ಪೂರ್ವಾನುಮತಿ ಕಡ್ಡಾಯವಾಗಿದೆ. 128 ಮಂದಿ ಆಧಿಕಾರಿಗಳಲ್ಲಿ ಬಿಡಿಎ ಮಾಜಿ‌ ಆಯುಕ್ತರು, ಇಂಜಿನಿಯರ್ ಗಳು, ಪಿಡಿಓ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಒಳಗೊಂಡಂತೆ‌ ವಿವಿಧ ಇಲಾಖೆಯ ಸರ್ಕಾರಿ ಅಧಿಕಾರಿಗಳಿದ್ದಾರೆ.‌

ಇನ್ನೂ ಭ್ರಷ್ಟ ಅಧಿಕಾರಿಗಳು ತಮ್ಮ ಹೆಸರನ್ನ ಕೈ ಬಿಡಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗ್ತಿದೆ.ಆದರೆ 128 ಮಂದಿಯಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ 8 ಮಂದಿ ವಿರುದ್ಧ ಮಾತ್ರ ತನಿಖೆಗೆ ಮಾತ್ರ ಅವಕಾಶ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Edited By : PublicNext Desk
Kshetra Samachara

Kshetra Samachara

02/04/2022 10:40 am

Cinque Terre

1.95 K

Cinque Terre

0

ಸಂಬಂಧಿತ ಸುದ್ದಿ