ಬೆಂಗಳೂರು: ದರೋಡೆಗೆ ಸಂಚು ಹಾಕುತ್ತಿದ್ದ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವೈಯಾಲಿಕಾವಲ್ ರೌಡಿಶೀಟರ್ ಮನೋಜ್ ಅಲಿಯಾಸ್ ಮನು ಮತ್ತು ಆತನ ಸಹಚರ ಶೇಖರ್ ಬಂಧನವಾಗಿದ್ದು, ಆರೋಪಿಗಳು ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರಗಳನ್ನ ಹಿಡಿದು ದರೋಡೆಗೆ ಪ್ಲಾನ್ ಹಾಕುತ್ತಿದ್ದರು. ಸಾರ್ವಜನಿಕರ ಬಳಿ ಚಿನ್ನಾಭರಣ ದರೋಡೆ ಮಾಡಲು ಹೊಂಚು ಹಾಕುತ್ತಿದ್ದರು. ಸಿಸಿಬಿ OCW ಸ್ಕ್ವಾಡ್‌ಗೆ ಲಾಕ್ ಆಗಿದ್ದಾರೆ.
ಪೀಣ್ಯಾ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದ ಮನು ವಿರುದ್ಧ ಒಂದು ಕೊಲೆ ಪ್ರಕರಣ ಕೂಡ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಬಂಧಿಸಿ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿರುವ ಸಿಸಿಬಿ ಪೊಲೀಸರು ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
02/04/2022 10:47 am