ಬೆಂಗಳೂರು: ರಾತ್ರಿ ವೇಳೆ ಒಂಟಿಯಾಗಿ ಓಡಾಡುವವರನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡುವ ಪುಂಡರ ಗ್ಯಾಂಗ್ ಬೆಂಗಳೂರಿನಲ್ಲಿ ಸಕ್ರಿಯವಾಗಿದೆ.
ಇದಕ್ಕೆ ಪೂರಕವೆಂಬಂತೆ ಆರ್ ಆರ್ ಆರ್ ಸಿನಿಮಾ ನೋಡಿಕೊಂಡು ಮಧ್ಯರಾತ್ರಿ ಬೈಕಿನಲ್ಲಿ ಮನೆಗೆ ಹೋಗುವಾಗ ಸ್ಕೂಟರ್ ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ಕಳೆದ ತಿಂಗಳು 25 ರ ಮಧ್ಯರಾತ್ರಿ ಆರ್ ಆರ್ ಆರ್ ಸಿನಿಮಾ ನೋಡಿಕೊಂಡು ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡರಪಾಳ್ಯ ಬಳಿ ಬೈಕಿನಲ್ಲಿ ಹೋಗುವಾಗ ಮೂವರು ದುಷ್ಕರ್ಮಿಗಳು ಸಿನಿಮೀಯ ಶೈಲಿಯಲ್ಲಿ ಬೈಕ್ ನಲ್ಲಿ ಅಡ್ಡಗಟ್ಟಿದ್ದಾರೆ. ಮಾರಕಾಸ್ತ್ರ ತೋರಿಸಿ ಬೆದರಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದಾರೆ.
ಈ ವೇಳೆ ಬೈಕ್ ಅಡ್ಡಗಟ್ಟಿದ ರಾಬರ್ಸ್ ಗೆ ಪ್ರತಿರೋಧ ಮಾಡಿದ ಯುವಕನಿಗೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಣವಿಲ್ಲ ಎಂದು ಬೇಡಿಕೊಂಡು ಓಡಿದರೂ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ.
ಮೊಬೈಲ್ ಹಣ ಕಿತ್ತುಕೊಂಡು ಹಲ್ಲೆ ಮಾಡಿ ಗ್ಯಾಂಗ್ ಎಸ್ಕೇಪ್ ಆಗಿದೆ. ಸದ್ಯ ಸಿಸಿಟಿವಿ ಆಧಾರದ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಹೆಣ್ಣೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Kshetra Samachara
04/04/2022 03:49 pm