ಬೆಂಗಳೂರು: ಇತ್ತೀಚೆಗೆ ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಮಹಿಳೆ ಕುಸಿದುಬಿದ್ದು ಸಾವನ್ನಪ್ಪಿದ್ದರು. ಮೊದಲಿಗೆ ಇದನ್ನು ಹೃದಯಾಘಾತ ಎಂದು ಹೇಳಲಾಗಿತ್ತು. ಆದರೆ ಆಕೆ ಸಾವಿಗೆ ಹೃದಯಾಘಾತವಲ್ಲ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ.
ಕಳೆದ ತಿಂಗಳು ಮಾರ್ಚ್ 26ರಂದು ಮಲೇಶ್ ಪಾಳ್ಯದ ಜೀಮ್‌ನಲ್ಲಿ ವಿನಯಾ ಕುಮಾರಿ ಎಂಬುವರು ವರ್ಕೌಟ್ ಮಾಡುವಾಗು ಕುಸಿದು ಬಿದ್ದು ಸಾವನ್ನಪ್ಪಿದ್ದರು. ಇದೀಗ ಪೋಸ್ಟ್ ಮಾರ್ಟಮ್ ರಿಪೋರ್ಟ್ ಪೊಲೀಸರ ಕೈ ಸೇರಿದ್ದು, ಮೆದುಳಿನ ರಕ್ತನಾಳದ ಛಿದ್ರಗೊಂಡ ಪರಿಣಾಮವಾಗಿ ಸೆರೆಬ್ರಲ್ ಹೆಮರೇಜ್ ಉಂಟಾಗಿ ಕೋಮಾಗೆ ತಲುಪಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಮಹಿಳೆ ಜಿಮ್‌ನಲ್ಲಿ ವರ್ಕೌಟ್ ಮಾಡುವ ವೇಳೆ ಭಾರವಾದ ವಸ್ತುವನ್ನು ಲಿಫ್ಟ್ ಮಾಡಿದ್ದಾರೆ. ಈ ವೇಳೆ ರಕ್ತದ ಒತ್ತಡ ಉಂಟಾಗಿದೆ. ಮೆದುಳಿನಲ್ಲಿ ಒತ್ತಡದಿಂದ ರಕ್ತನಾಳಗಳು ಒಡೆದು, ರಕ್ತಸ್ರಾವವಾಗಿ ಕೋಮಾಗೆ ಹೋಗಿದ್ದಾರೆ. ಬಳಿಕ ಯುವತಿ ಸಾವನ್ನಪ್ಪಿದ್ದಾರೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ವೈದ್ಯರು ಉಲ್ಲೇಖಿಸಿದ್ದಾರೆ.
PublicNext
04/04/2022 05:01 pm