ಬೆಂಗಳೂರು: ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದ ಚಂದ್ರು ಕೊಲೆ ಪ್ರಕರಣ ಸಂಬಂಧ ಪೊಲೀಸರು ಫ್ಯಾಕ್ಟ್ ಚೆಕ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಕರ್ನಾಟಕ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ನಿನ್ನೆ ಗೋರಿಪಾಳ್ಯದಲ್ಲಿ ನಡೆದ 22 ವರ್ಷದ ಚಂದ್ರು ಕೊಲೆ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಗೃಹ ಸಚಿವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಪೊಲೀಸರು ಫ್ಯಾಕ್ಟ್ ಚೆಕ್ ಮಾಡಿದ್ದಾರೆ.
ಅನ್ಯಭಾಷೆ ಬೋರ್ಡ್ ಗಳಿಗೆ ಮಸಿ ಬಳಿಯುತ್ತೀರಾ. ಸಂತೋಷ, ಆದರೆ ಇವತ್ತು ಕನ್ನಡಿಗರ ಉಳಿವು ನಿಮ್ಮಿದಂಲೇ ಉರ್ದು ಮಾತನಾಡದಿದಕ್ಕೆ ಕೊಲೆಯಾಗಿದ್ದಾನೆ. ಶಾಂತಿಧೂತರ ಮೇಲೆ ನಿಮ್ಮ ಸದಾ ಶೂನ್ಯ. ಭಾಷಾ ಹೋರಾಟದಲ್ಲಿ ಸಮಾನತೆ ಇರಲಿ. ಇವನಿಗಾಗಿ ಧ್ವನಿ ಎತ್ತೋಣ. ಎಂದು ವಕೀಲೆ ಮೀರಾ ರಾಘವನ್ ಚಂದ್ರು ಪೋಟೊ ಸಮೇತ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು.
ಇದೇ ವಿಚಾರವಾಗಿ ಖಾಸಗಿ ಸುದ್ದಿ ವಾಹಿನಿಯಲ್ಲಿ ಸುದ್ದಿ ಪ್ರಸಾರವಾಗಿತ್ತು. ಇದೇ ವಿಡಿಯೋ ಆಧರಿಸಿ ಸ್ಕ್ರೀನ್ ಶಾಟ್ ತೆಗೆದುಕೊಂಡು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ವೈರಲ್ ಗೆ ಕಾರಣರಾಗಿದ್ದರು. ಬಳಿಕ ತಾವು ಮಾಡಿದ ಪೋಸ್ಟ್ ಸುಳ್ಳು ಸುದ್ದಿ ಎಂದು ಮನಗಂಡು ವಕೀಲೆ ಪೋಸ್ಟ್ ಡಿಲೀಟ್ ಮಾಡಿರುವುದು ಗಮನಿಸಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈರಲ್ ಆಗುತ್ತಿರುವ ಸುಳ್ಳು ಸುದ್ದಿಗಳ ಬಗ್ಗೆ ಸತ್ಯಾಸತ್ಯತೆ ಪರಿಶೀಲಿಸಲಾಗಿದ್ದು ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು ಸುದ್ದಿಯಾಗಿದ್ದು ಸಾಮಾಜಿಕ ಸ್ವಾಸ್ಥ್ಯ ಕೆಡಿಸಲು ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಸರಿಯಾಗಿ ಪರಿಶೀಲಿಸದೇ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಬಾರದೆಂದು ಈ ಮೂಲಕ ಪೊಲೀಸರು ಕೋರಿದ್ದಾರೆ.
Kshetra Samachara
06/04/2022 05:15 pm