ಬೆಂಗಳೂರು: ವಾಸವಿದ್ದ ಮನೆಯ ಮೇಲ್ಭಾಗದಲ್ಲಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಆರೋಪಿಯನ್ನ ಕೆಜಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಅಕ್ರಂ ನಜೀರ್ ಪಾಶಾ ಬಂಧಿತ ಆರೋಪಿಯಾಗಿದ್ದು, ಏ.9ರಂದು ಯಾಸ್ಮೀನ್ ಎಂಬಾಕೆಯ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬೀಗ ಮುರಿದು ಆರೋಪಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ
ಕದ್ದ ಚಿನ್ನಾಭರಣ ಮಾರಲು ಯತ್ನಿಸುತ್ತಿದ್ದಾಗ ಬಂಧಿಸಿದ್ದಾರೆ. ಬಂಧಿತನಿಂದ 9 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kshetra Samachara
11/04/2022 03:41 pm