ಚಿಕ್ಕಬಳ್ಳಾಪುರ: ಹುಬ್ಬಳ್ಳಿಯಲ್ಲಿ ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲುತೂರಾಟ ಪ್ರಕರಣ ನಡೆದ ಬೆನ್ನಲ್ಲೇ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಅಲಿಪುರದಲ್ಲಿ ಮತ್ತೆ ಪೊಲೀಸರ ಮೇಲೆ ಕಲ್ಲುತೂರಾಟ ಘಟನೆ ನಡೆದಿದೆ. ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳ ಸಾಗಾಣಿಕೆ ನಡೆಯುತ್ತಿತ್ತು. ಇದರ ಬಗ್ಗೆ ಮಾಹಿತಿ ಲಭ್ಯವಾಗಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಅಸುಗಳನ್ಮು ರಕ್ಷಿಸಿದ್ದಾರೆ.
ರವಿವಾರ ಮಧ್ಯಾಹ್ನದ ವೇಳೆ ಘಟನೆ ನಡೆದಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಹಸುಗಳ ಮಾಹಿತಿಯ ಮಹಜರ್ ನಡೆಸುತ್ತಿದ್ದ ವೇಳೆ ಮಹಿಳೆಯರು ಏಕಾಏಕಿ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ..
ಪುರುಷರು ಸುಮ್ಮನಿದ್ದರೆ ಮಹಿಳೆಯರು ತಮಗೆ ನ್ಯಾಯ ಸಿಗಬೇಕು. ಅನ್ಯಾಯವಾಗಿದೆ ಎಂದು ಜೋರು ಧ್ವನಿಯಲ್ಲಿ ಕಿರುಚಾಡಿದ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕಿದೆ. ಸತ್ಯಾಂಶವನ್ನು ಬಯಲಿಗೆಳೆದು ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಶಿಕ್ಷೆಯಾಗಬೇಕಿದೆ..
PublicNext
18/04/2022 09:16 am