ಬೆಂಗಳೂರು:ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ಹಾಕಿ ಪತ್ನಿಗೆ ಕುಡಿಸಿ ಪ್ರಜ್ಞೆತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಪತಿಯ ವಿರುದ್ಧ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಕನಕಪುರ ರಸ್ತೆಯ ನಿವಾಸಿಯಾಗಿರೋ 30 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಆಕೆಯ ಪತಿ ವೆಂಕಟಸ್ವಾಮಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ದೂರುದಾರ ಮಹಿಳೆ 2013ರಲ್ಲಿ ಮೊದಲ ಪತಿಗೆ ವಿಚ್ಛೇದನ ನೀಡಿದ್ದು, ವೆಂಕಟಸ್ವಾಮಿಯನ್ನು ಪ್ರೀತಿಸಿ 2ನೇ ವಿವಾಹವಾಗಿದ್ದಳು. ವಿವಾಹವಾದ ಆರಂಭದಲ್ಲಿ ಪತ್ನಿ ಜತೆಗೆ ಅನ್ಯೋನ್ಯವಾಗಿದ್ದ ಪತಿ, ನಂತರ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ.
ಇತ್ತೀಚೆಗೆ ಆರೋಪಿಯು ಜ್ಯೂಸ್ ನಲ್ಲಿ ಮತ್ತು ಬರುವ ವಸ್ತು ಬೆರೆಸಿ ಪತ್ನಿಗೆ ಕೊಟ್ಟಿದ್ದ. ಪತ್ನಿ ಪ್ರಜ್ಞೆ ತಪ್ಪಿದ ನಂತರ ಆಕೆಯ ನಗ್ನ ಚಿತ್ರ ಸೆರೆ ಹಿಡಿದು ಸ್ನೇಹಿತರಿಗೆ ಕಳುಹಿಸಿದ್ದ. ಸ್ನೇಹಿತನೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಪತ್ನಿಗೆ ಪೀಡಿಸುತ್ತಿದ್ದ. ಈ ನಡುವೆ ದೂರುದಾರ ಮಹಿಳೆಯ ತಂದೆ ಮೃತಪಟ್ಟಿದ್ದರು. ತಂದೆಗೆ ಬರುವ ಪೆಂಕ್ಷನ್ ಹಣ ಕೊಡುವಂತೆ ಪತಿ ಹಿಂಸೆ ಕೊಡುತ್ತಿದ್ದ. ಹಣ ಕೊಡಲು ನಿರಾಕರಿಸಿದಾಗ ನಗ್ನ ಚಿತ್ರವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
PublicNext
18/04/2022 09:34 pm