ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರು ಅರೆಸ್ಟ್

ಬೆಂಗಳೂರು: ನಕಲಿ‌ ಕೀ ಬಳಸಿ ರಾಜಧಾನಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಬೈಕ್ ಖದೀಮರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.

ವಿನಿತ್ ಕುಮಾರ್ ಹಾಗೂ‌ ಮುಬಾರಕ್ ಬಂಧಿತ ಆರೋಪಿಗಳಾಗಿದ್ದು ಬಂಧಿತರಿಂದ 5 ಲಕ್ಷ ಮೌಲ್ಯದ 8 ಬೈಕ್ ಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ‌.

ಇಬ್ಬರು ಆರೋಪಿಗಳು ಸ್ನೇಹಿತರಾಗಿದ್ದು ಕಡಿಮೆ ಸಮಯದಲ್ಲಿ ಬೇಗ ಶ್ರೀಮಂತರಾಗಲು ಸಾರ್ವಜನಿಕ ಪ್ರದೇಶಗಳಲ್ಲಿ ನಿಲ್ಲಿಸಿದ್ದ ಬೈಕ್ ಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದರು‌.. ಕದ್ದ ಬೈಕ್ ಗಳನ್ನ ಬೇರೆಯವರಿಗೆ ಮಾರಾಟ ಮಾಡಲು ಸಿದ್ದತೆ ನಡೆಸಿಕೊಂಡಿದ್ದರು‌. ಖಚಿತ ಮಾಹಿತಿ ಮೇರೆಗೆ ಇಬ್ಬರು ಬೈಕ್ ಖದೀಮರನ್ನು ಬಂಧಿಸಿದ್ದಾರೆ. ಖದೀಮರ ಮಡಿವಾಳ ಹಾಗೂ ಯಲಹಂಕ ಪೊಲೀಸ್ ಠಾಣೆಯಲ್ಲಿ ಒಟ್ಟು ಎಂಟು ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

19/04/2022 02:33 pm

Cinque Terre

2.07 K

Cinque Terre

0

ಸಂಬಂಧಿತ ಸುದ್ದಿ