ಆರ್ ಆರ್ ನಗರ: ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿರೋ ಅಮಾನವೀಯ ಕೃತ್ಯ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಏಪ್ರಿಲ್ 19 ರಂದು ಬೆಳಗ್ಗೆ ರಸ್ತೆ ದಾಟುತ್ತಿದ್ದ ನಾಯಿ ಮೇಲೆ ಕಾರು ಹತ್ತಿಸಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ.
ಅಪಘಾತಕ್ಕೊಳಗಾದ ನಾಯಿ ನಡು ರಸ್ತೆಯಲ್ಲೇ ವಿಲವಿಲ ಒದ್ದಾಡಿದ್ದನ್ನು ಕಂಡ ಮಹಿಳೆ ಆರೈಕೆ ಮಾಡಿದ್ರೂ ನಾಯಿ ಪ್ರಾಣ ಬಿಟ್ಟಿದೆ. ನಾಯಿ ಮೇಲೆ ಕಾರು ಹತ್ತುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ಘಟನೆ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ಕೂಡ ದಾಖಲಾಗಿದೆ. ಘಟನೆ ಸಂಬಂಧ ಕಾರು ಚಾಲಕನ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದು, ಸತ್ಯನಾರಾಯಣ ಎಂಬ ವ್ಯಕ್ತಿಗೆ ಸೇರಿದ ಕಾರು ಎಂದಷ್ಟೇ ತಿಳಿದುಬಂದಿದೆ.
PublicNext
21/04/2022 01:47 pm