ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್‌ಆತ್ಮಹತ್ಯೆ ಪ್ರಕರರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಪಂಚಾಯತ್ ರಾಜ್ ಇಲಾಖೆಯಿಂದ ನೀಡಿದ್ದಾರೆ ಎನ್ನಲಾದ ಅನುಮತಿ ಪತ್ರ ನಕಲಿ ಎಂದ ಗ್ರಾಮೀಣಾಭಿವೃದ್ದಿ ಇಲಾಖೆ ದೂರು ದಾಖಲಿಸಿದೆ. ಇಲಾಖೆ ಲೆಟರ್ ಹೆಡ್‌ನಲ್ಲಿ ಅನುಮತಿ ನೀಡಲಾಗಿದೆ ಎನ್ನುವ ರೀತಿ ನಕಲು ಮಾಡಿದ್ದಾರೆ ಎಂದು ವಿಧಾನಸೌಧ ಠಾಣೆಗೆ ದೂರು ನೀಡಿರುವ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ರಮೇಶ್‌ರಿಂದ ದೂರು ಸಲ್ಲಿಸಲಾಗಿದೆ.
ಬೆಳಗಾವಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ಐಹೊಳೆ ಕಾಮಗಾರಿ ಮಾಡಲು ಅನುಮತಿ ನೀಡಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿತ್ತು. ಈ ಪತ್ರದ ಅಧಾರದಲ್ಲಿ ಸಂತೋಷ್ ಕಾಮಗಾರಿಗಳನ್ನ ಮಾಡಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದ್ರೆ ಈಗ ಗ್ರಾಮೀಣಾಭಿವೃದ್ಧಿ ಇಲಾಖೆ ಈ ಪತ್ರವನ್ನೇ ನಕಲು ಎಂದು ವಿಧಾನಸೌಧ ಠಾಣೆಗೆ ದೂರು ನೀಡಿದೆ. ಸದ್ಯ ವಿಧಾನಸೌಧ ಠಾಣೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ದೂರಿನನ್ವಯ ಎಫ್ಐಆರ್ ದಾಖಲಾಗಿದ್ದು, ನಕಲು ಮಾಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸ್ತಿದ್ದಾರೆ.
PublicNext
21/04/2022 10:38 pm