ಬೆಂಗಳೂರು: ಊರಿಗೆ ತೆರಳಿದ್ದವರ ಮನೆಯನ್ನೇ ಟಾರ್ಗೆಟ್ ಮಾಡಿದ ಕಳ್ಳರು ಬೀಗ ಹೊಡೆದು ಬೀರುವಿನಲ್ಲಿದ್ದ ಚಿನ್ನಾಭರಣ, ನಗದು ದೋಚಿ ಪರಾರಿಯಾದ ಘಟನೆ ಬಾಗಲುಗುಂಟೆಯ ವಿಜಯ ಲಕ್ಷ್ಮೀ ಬಡಾವಣೆಯಲ್ಲಿ ನೆಡೆದಿದೆ.
ಇನ್ನು ಬಾಗಲಗುಂಟೆ ನಿವಾಸಿ ಸಣ್ಣೇಗೌಡ ಎಂಬುವರ ಮನೆಯಲ್ಲಿ ಕಳ್ಳತನವಾಗಿದ್ದು, ಮನೆಯಲ್ಲಿದ್ದ ಸುಮಾರು 2.30 ಲಕ್ಷ ಮೌಲ್ಯದ 130 ಗ್ರಾಂ ಚಿನ್ನಾಭರಣ, 600 ಗ್ರಾಂ ತೂಕದ ಬೆಳ್ಳಿ ಸಾಮಗ್ರಿಗಳು ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ.
ಕುಟುಂಬದವರು ಹುಣಸೆಮಾರನಹಳ್ಳಿಗೆ ತೆರಳಿದ್ದ ವೇಳೆ ಈ ಘಟನೆ ನೆಡೆದಿದ್ದು, ಊರಿಂದ ಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
21/04/2022 11:09 pm