ಬೆಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ಬಂಧಿತ ಆರೋಪಿ. ಈತ ಡಾರ್ಕ್ ವೆಬ್ ಸೈಟ್ ವಿಕ್ರೀಮ್ ಆ್ಯಪ್ ನಲ್ಲಿ ಬಿಟ್ ಕಾಯಿನ್ ಮೂಲಕ ಡ್ರಗ್ಸ್ ಸಿಂಥೆಟಿಕ್ ಡ್ರಗ್ಸ್ ಖರೀದಿ ಮಾಡ್ತಿದ್ದ.
ಕಾಲೇಜು ವಿದ್ಯಾರ್ಥಿಗಳು ಹಾಗೂ ಟೆಕ್ಕಿಗಳನ್ನು ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದ. ಬಂಧಿತನಿಂದ 6.50 ಲಕ್ಷ ಮೌಲ್ಯದ MDMA ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಸದ್ಯ ಆರೋಪಿ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದ್ದು,ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
Kshetra Samachara
26/04/2022 03:58 pm