ಬೆಂಗಳೂರು: ಅನಧಿಕೃತವಾಗಿ ಮಾರುತಿ ಮಂದಿರ ವಾರ್ಡ್ ವ್ಯಾಪ್ತಿಯಲ್ಲಿ ಅಳವಡಿಸಿರುವ ಪ್ಲೆಕ್ಸ್ ಹಾಗೂ ಬ್ಯಾನರ್ ತೆರವು ಕಾರ್ಯಾಚರಣೆಗೆ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸುವುದಾಗಿ ಚಂದ್ರ ಲೇಔಟ್ ಠಾಣೆ ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಬಿಬಿಎಂಪಿ ಚಂದ್ರ ಲೇಔಟ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಪತ್ರ ಬರೆದಿರುವ ಪೊಲೀಸರು, ಮಾರುತಿ ಮಂದಿರ ವಾರ್ಡ್ ವ್ಯಾಪ್ತಿಯ ಶಿವಾನಂದ ನಗರ 2 ನೇ ಅಡ್ಡ ರಸ್ತೆಯಲ್ಲಿ ಬಿಬಿಎಂಪಿ ಅನುಮತಿ ಪಡೆಯದೇ ಬೃಹತ್ ಪ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ.
ಇಲ್ಲಿನ ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಪ್ಲೆಕ್ಸ್ ,ಬ್ಯಾನರ್‌ಗಳನ್ನ ರಾತ್ರಿ ಸಮಯದಲ್ಲಿ ಹಾಕಲಾಗಿದೆ. ಈ ಬಗ್ಗೆ ದೂರು ಸಲ್ಲಿಕೆ ಮಾಡಿದ ಹಿನ್ನೆಲೆಯಲ್ಲಿ FIR ದಾಖಲು ಮಾಡಲಾಗಿದ್ದು, ತೆರವು ಕಾರ್ಯಚರಣೆ ವೇಳೆ ಪಾಲಿಕೆ ಅಧಿಕಾರಿಗಳಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸರು ಪತ್ರದ ಮೂಲಕ ತಿಳಿಸಿದ್ದಾರೆ.
Kshetra Samachara
27/04/2022 09:15 pm