ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೀನಕೃತ್ಯ ನಡೆದಿದೆ. ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿ ಪೈಶಾಚಿಕ ಕೃತ್ಯ ನಡೆಸಿದ್ದಾನೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯನ್ನ ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಮದ್ಯಪಾನ ಮಾಡಿಸಿ ಅತ್ಯಾಚಾರ ಎಸಗಿದ್ದಾನೆ. ಕಾಮುಕನ ಅಟ್ಟಹಾಸಕ್ಕೆ ಬಳಲಿದ ಮಹಿಳೆ ಕೂಗಾಟ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ರು.
ಕೂಡಲೇ ಸ್ಥಳಕ್ಕೆ ಆಗಮಿಸಿದ ಬ್ಯಾಡರಹಳ್ಳಿ ಪೊಲೀಸ್ರು ಆರೋಪಿ ನರಸಿಂಹರಾಜು ನನ್ನು ಬಂಧಿಸಿದ್ದಾರೆ. ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.
PublicNext
30/04/2022 02:53 pm