ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿಲ್ಲಾದಲ್ಲಿ ಕಳ್ಳತನ ಮಾಡಿದ್ದ ಮಹಿಳೆ ಬಂಧನ: 35 ಲಕ್ಷ ಮೌಲ್ಯದ ಆಭರಣ ಜಪ್ತಿ

ವರದಿ- ಬಲರಾಮ್ ವಿ

ಬೆಂಗಳೂರು: ವಿಲ್ಲಾದಲ್ಲಿ ಚಿನ್ನ ಹಾಗೂ ವಜ್ರದ ಆಭರಣವನ್ನು ಕಳ್ಳತನ ಮಾಡಿದ್ದ ಮಹಿಳೆಯನ್ನು ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿ 35 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಸುಮಾ (40) ಬಂಧಿತ ಮಹಿಳೆ. ನಗರದ ಹೂಡಿ, ಬಸವನಗರದ ತಿಮ್ಮಪ್ಪ ರೆಡ್ಡಿ ಲೇಔಟ್‌ನಲ್ಲಿ ವಾಸವಾಗಿರುವ ಸುಮಾ, ವಿಲ್ಲಾವೊಂದರಲ್ಲಿ ಚಿನ್ನ ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿದ್ದಾಳೆ ಎಂದು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆಕೆಯನ್ನು ಬಂಧಿಸಿ 213 ಗ್ರಾಂ ಚಿನ್ನ, ವಜ್ರದ ಆಭರಣಗಳು, 692 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ಸ್ಪೆಕ್ಟರ್ ಎಸ್.ಎಲ್.ಆರ್. ರೆಡ್ಡಿ ನೇತೃತ್ವದ ಸಿಬ್ಬಂದಿ ತಂಡ ಆರೋಪಿಯನ್ನು ಬಂಧಿಸಿದ್ದಾರೆ. ಇವರ ಈ ಕಾರ್ಯ ವೈಖರಿಯನ್ನು ಈಗ ಶ್ಲಾಘಿಸಲಾಗಿದೆ.

Edited By : Manjunath H D
Kshetra Samachara

Kshetra Samachara

30/04/2022 08:11 pm

Cinque Terre

3.21 K

Cinque Terre

0

ಸಂಬಂಧಿತ ಸುದ್ದಿ