ದೊಡ್ಡಬಳ್ಳಾಪುರ : ಒಂದೇ ಗ್ರಾಮದಲ್ಲಿ ಒಂದೇ ರಾತ್ರಿಯಲ್ಲಿ ಮೂರು ದೇವಸ್ಥಾನಗಳಿಗೆ ನುಗ್ಗಿದ ಕಳ್ಳರು ಹುಂಡಿಗಳನ್ನ ಹೊತ್ತೊಯ್ದ ಕಳ್ಳರ ಕೈಚಳಕಕ್ಕೆ ಗ್ರಾಮಸ್ಥರು ಬೆಚ್ಚಿಬಿದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಗ್ರಾಮದ ಈಶ್ವರನ ದೇವಾಲಯ, ಸತ್ಯಮ್ಮ ,ಮತ್ತು ಅಯ್ಯಪ್ಪ ಸ್ವಾಮಿ ದೇವಾಲಯಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಈಶ್ವರ ಮತ್ತು ಸತ್ಯಮ್ಮ ದೇವಾಲಯದ ಹುಂಡಿಯನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆ ಇದೇ ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ಕಳ್ಳತನ ಪ್ರಕರಣ ನಡೆದಿದ್ದು, ಈಗ ಒಂದೇ ರಾತ್ರಿ ಗ್ರಾಮದ ಮೂರು ದೇವಸ್ಥಾನಗಳಲ್ಲಿ ಕಳ್ಳತನ ನಡೆದಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
07/05/2022 05:47 pm