ಬೆಂಗಳೂರು: ಆಸಿಡ್ ದಾಳಿಗೆ ತುತ್ತಾಗಿ 16 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯನ್ನು ಇಂದು ಸ್ಪೆಷಲ್ ಬರ್ನಿಂಗ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. 36 ಪರ್ಸೆಂಟ್ ದೇಹ ಆಸಿಡ್ ದಾಳಿಯಿಂದ ಸುಟ್ಟುಹೋಗಿದ್ದು ಇಷ್ಟು ದಿನ ಐಸಿಯುನಲ್ಲಿ ಚಿಕಿತ್ಸೆ ಕೊಡುತ್ತಿದ್ದ ವೈದ್ಯರು ಈಗ ಸ್ಪೆಷಲ್ ವಾರ್ಡ್‌ನಲ್ಲಿ ಚಿಕಿತ್ಸೆ ಕೊಡುತ್ತಿದ್ದಾರೆ.
ಸದ್ಯಕ್ಕೆ ಯುವತಿಯ ಪ್ರಾಣಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ ಮತ್ತು ಯುವತಿಯ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿದೆ ಮತ್ತು ಯುವತಿಗೆ ಮಾತನಾಡಲು ಸಾಧ್ಯವಾಗುತ್ತಿದೆ. ಯುವತಿಯು ಸಹಜ ಸ್ಥಿತಿಗೆ ಮರಳುತ್ತಿದ್ದಾರೆ. ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು ಎಂದು ಯುವತಿಯ ದೊಡ್ಡಪ್ಪ ಶಂಕರ್ ಪಬ್ಲಿಕ್ ನೆಕ್ಸ್ಟ್‌ಗೆ ತಿಳಿಸಿದರು.
ಇನ್ನೊಂದು ಕಡೆ ಪೊಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಅಕ್ಕಪಕ್ಕದ ರಾಜ್ಯಗಳಲ್ಲಿ ಆಸಿಡ್ ನಾಗೇಶನಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.
ನವೀನ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
PublicNext
13/05/2022 05:01 pm