ಬೆಂಗಳೂರು: ನೆರೆ ರಾಜ್ಯಗಳಿಂದ ಗಾಂಜಾ, ಹ್ಯಾಶ್ ಆಯಿಲ್, ಎಲ್.ಎಸ್.ಡಿ ಖರೀದಿಸಿ ಬೆಂಗಳೂರಿಗೆ ಮಾರುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.
ಸುರೇಂದ್ರ ಮತ್ತು ರಾಜೇಶ್ ಬಂಧಿತ ಆರೋಪಿಗಳು. ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಅದೇ ರೀತಿ ಕೆ.ಎಸ್.ಲೇಔಟ್ ವ್ಯಾಪ್ತಿಯಲ್ಲಿ ದಂಧೆಯಲ್ಲಿ ತೊಡಗಿದ್ದಾಗಲೇ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 10 ಲಕ್ಷ ರೂ. ಮೌಲ್ಯದ 5 ಕೆ.ಜಿ ಗಾಂಜಾ, 260 ಗ್ರಾಂ ಹ್ಯಾಶ್ ಆಯಿಲ್, 20 ಎಲ್.ಎಸ್.ಡಿ ಸ್ಟ್ರಿಪ್ಸ್ ವಶಕ್ಕೆ ಪಡೆದಿದ್ದಾರೆ. ಕೆ.ಎಸ್.ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಮೂವರು ಆರೋಪಿಗಳಿಗಾಗಿ ಪತ್ತೆ ಕಾರ್ಯ ಮುಂದುವರೆದಿದೆ.
Kshetra Samachara
22/05/2022 08:55 pm