ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಚಾಲಕನ ಅಜಾಗರೂಕತೆ : ಕಾಮಧೇನು ಬಲಿ

ಆನೇಕಲ್ : ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ಹಸುವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಡಿಭಾಗದ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಬ್ ಮಂಗಳ ವೇಟ್ ಬಳಿ ನಡೆದಿದೆ.

ಇನ್ನು ನಿನ್ನೆ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ವೆಂಕಟೇಶಪ್ಪ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಚಾಲಕನ ಅಜಾಗರೂಕತೆಯೇ ಈ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ಸದ್ಯ ಬಸ್ ಚಾಲಕ ಚಾಲಕ ಪರಾರಿಯಾಗಿದ್ದಾನೆ. ಇನ್ನು ಈ ಖಾಸಗಿ ಬಸ್ ಆನೇಕಲ್ ನಿಂದ ಹೊಸೂರು ಕಡೆಗೆ ಹೋಗುವಾಗ ಅತಿವೇಗವಾಗಿ ಚಲಿಸುತ್ತಿದ್ದ ಬಸ್ಸು ನಿಯಂತ್ರಣ ತಪ್ಪಿ ರಾಸುವಿಗೆ ಡಿಕ್ಕಿ ಹೊಡೆದಿದೆ. ಬಳಿಕ ಸ್ಥಳೀಯರು ಬಸ್ ತಡೆಯಲು ಹೋದಾಗ ಚಾಲಕ ಎಸ್ಕೇಪ್ ಆಗಿದ್ದಾನೆ.

ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇನ್ನು ಹಸುವನ್ನ ಕಳೆದುಕೊಂಡಿದ್ದ ವೆಂಕಟೇಶಪ್ಪ ಹಾಗೂ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.

ಹರೀಶ್ ಗೌತಮನಂದ ಪಬ್ಲಿಕ್ ನೆಕ್ಸ್ಟ್ ಆನೇಕಲ್

Edited By :
Kshetra Samachara

Kshetra Samachara

23/05/2022 11:14 pm

Cinque Terre

3.65 K

Cinque Terre

0

ಸಂಬಂಧಿತ ಸುದ್ದಿ