ಬೆಂಗಳೂರು:ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಮಾರಾಟ ಮಾಡ್ತಿದ್ದ ಆರೋಪಿಯ ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳನ್ನ ಟಾರ್ಗೇಟ್ ಮಾಡಿಕೊಂಡು ಹೊರ ದೇಶದಿಂದ ಚರಸ್ ತರಿಸಿ ರವಿತೇಜ ಮಾರಾಟ ಮಾಡ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಮಾದಕವಸ್ತು ನಿಗ್ರಹದಳ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ.
ಸದ್ಯ ಬಂಧಿತ ಆರೋಪಿಯಿಂದ 8 ಲಕ್ಷ ರೂ ಮೌಲ್ಯದ ಚರಸ್ ಮತ್ತು ಒಂದು ಐಫೋನ್ ಹಾಗೂ ವೇಯಿಂಗ್ ಮಶಿನ್ ಸೀಜ್ ಮಾಡಿದ್ದಾರೆ. ಇನ್ನೂ ಆರೋಪಿ ಪುಟ್ಟೇನಹಳ್ಳಿ ಜೆಪಿ ನಗರ ಭಾಗದಲ್ಲಿ ತನ್ನ ಡ್ರಗ್ ಸಪ್ಲೈ ಜಾಲವನ್ನು ಹೊಂದಿದ್ದ ಎಂದು ತಿಳಿದು ಬಂದಿದೆ. ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.
Kshetra Samachara
27/05/2022 02:17 pm